ಬೆಂಗಳೂರು, ಜ.17- ವಿಧಾನಸೌಧದಲ್ಲಿ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೋಹನ್ ಅವರ ಜಾಮೀನು ಅರ್ಜಿಯನ್ನು ಲೋಕಾಯುಕ್ತ ನ್ಯಾಯಾಲಯ ವಜಾ ಮಾಡಿದೆ.
ಸಚಿವ ಪುಟ್ಟರಂಗಶೆಟ್ಟಿ ಅವರ ಆಪ್ತರೆನ್ನಲಾದ ಮೋಹನ್ ಬಳಿ 26.7 ಲಕ್ಷ ರೂ. ಹಣ ದೊರೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಮೋಹನ್ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾ ಮಾಡಿದೆ.