ಶಾಸಕ ನಾಗೇಂದ್ರ ಸಲ್ಲಿಸಿದ್ದ ಆರ್ಜಿ ವಿಚಾರಣೆ ಪೆ.18ಕ್ಕ ಮುಂದೂಡಿಕೆ

ಬೆಂಗಳೂರು, ಜ.17- ಅಕ್ರಮ ಅದಿರು ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾತಿ ವಿನಾಯಿತಿ ಕೋರಿ ಶಾಸಕ ಬಿ.ನಾಗೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಫೆ.18ಕ್ಕೆ ಮುಂದೂಡಿದೆ.

ಅಕ್ರಮ ಅದಿರು ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆನಂದ್‍ಸಿಂಗ್, ಬಿ.ನಾಗೇಂದ್ರ ಇಂದು ನ್ಯಾಯಾಲಯದ ಎದುರು ವಿಚಾರಣೆಗೆ ಹಾಜರಾಗಬೇಕಿತ್ತು. ಶಾಸಕಾಂಗ ಪಕ್ಷದ ಸಭೆ ಇರುವುದರಿಂದ ಹಾಜರಾತಿ ವಿನಾಯಿತಿ ನೀಡಬೇಕೆಂದು ಕೋರಿ ನ್ಯಾಯಾಧೀಶರಾದ ಮಂಜುಳಾ ಇಟ್ಟಿ ಅವರಿಗೆ ಮನವಿ ಸಲ್ಲಿಸಿದ್ದರು.

ಮನವಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯ ವಿಚಾರಣೆಯನ್ನು ಫೆ.18ಕ್ಕೆ ಮುಂದೂಡಿದೆ.
ಇಂದು ಕಾಂಗ್ರೆಸ್ ವಿಶೇಷ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಬಿ.ನಾಗೇಂದ್ರ ಅವರು ಗೈರು ಹಾಜರಾಗಲಿದ್ದಾರೆ ಎಂದು ಹೇಳಲಾಗುತ್ತಿತ್ತು. ನಿನ್ನೆಯಷ್ಟೆ ನಾಗೇಂದ್ರ ಅವರು ನಾಳೆ ನ್ಯಾಯಾಲಯದ ವಿಚಾರಣೆ ಇರುವುದರಿಂದ ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗುವುದು ಕಷ್ಟಸಾಧ್ಯ ಎಂದು ಹೇಳಿದ್ದರು.
ಇಂದು ಹಾಜರಾತಿ ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿರುವುದರಿಂದ ಅವರು ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗುವುದು ಖಚಿತವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ