ಕೋಲ್ಕತಾ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಮಣಿಸಲು ದೇಶವೇ ಒಂದಾಗಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನೇತೃತ್ವದಲ್ಲಿ ಆಯೋಜಿಸಲಾಗಿರುವ ಬಿಜೆಪಿ ವಿರೋಧಿ ಪಕ್ಷಗಳ ಒಕ್ಕೂಟ ಭಾರತ ರ್ಯಾಲಿಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಕೋಲ್ಕತ್ತಾಗೆ ಆಗಮಿಸಿರುವ ದೇವೇಗೌಡರು, ದೇಶದಲ್ಲಿ ಜಾತ್ಯತೀತ ಸರಕಾರ ಆಡಳಿತಕ್ಕೆ ಬರಲು ಐತಿಹಾಸಿಕ ಪ್ರಯತ್ನ ಇದಾಗಿದೆ. ಈ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿಯವರ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಓರ್ವ ಮಹಾನ್ ನಾಯಕಿ. ರಾಜಕೀಯಕ್ಕೆ ಇಂಥಹ ನಾಯಕರ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಕೋಲ್ಕತಾದ ಬ್ರಿಗೇಡ್ ಪರೇಡ್ ಮೈದಾನ ಪ್ರತಿಪಕ್ಷಗಳ ಮಹಾ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಲಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ‘ಏಕೀಕೃತ ಭಾರತ ರ‍್ಯಾಲಿ’ ಹೆಸರಿನಲ್ಲಿ ನಡೆಯಲಿರುವ ಈ ಬೃಹತ್ ಸಮಾವೇಶಕ್ಕೆ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿ ಸೇರಿದಂತೆ ಸುಮಾರು 20 ಬಿಜೆಪಿಯೇತರ ಪಕ್ಷಗಳ ಪ್ರಮುಖ ಮುಖಂಡರು ಹಾಜರಾಗಲಿದ್ದು, 2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ರಣಕಹಳೆ ಮೊಳಗಲಿದೆ.
Ahead Of Mamata Banerjee’s Rally, HD Deve Gowda’s Dig At Modi Government