ಮೂವರು ಶಂಕಿತ ಉಗ್ರರನ್ನು ಬಂಧಿಸಿದ ದೆಹಲಿ ಪೊಲೀಸರು

ನವದೆಹಲಿ: ದೆಹಲಿಯ ವಿಶೇಷ ಪೊಲೀಸ್ ದಳದ ಅಧಿಕಾರಿಗಳು ಮೂವರು ಶಂಕಿತ ಭಯೋತ್ಪಾದಕರನ್ನು ಬಂಧಿಸಿದ್ದಾರೆ.

ಬಂಧಿತರು ದಕ್ಷಿಣ ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಸಾಮಾಜಿಕ ಮತ್ತು ಧಾರ್ಮಿಕ ಸಂಸ್ಥೆಗಳ ಸದಸ್ಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಇವರು ಸಂಚು ರೂಪಿಸಿದ್ದರು. ಬಂಧಿತರ ಪೈಕಿ ಓರ್ವ ಅಫ್ಘಾನಿಸ್ತಾನ ಮೂಲದವನಾಗಿದ್ದು, ಇಬ್ಬರು ಭಾರತೀಯರು ಎಂದು ತಿಳಿದು ಬಂದಿದೆ.

ಪಾಕಿಸ್ತಾನದ ಗುಪ್ತಚರ ದಳ (ಐಎಸ್‌ಐ) ದಕ್ಷಿಣ ಭಾರತದಲ್ಲಿ ಆತಂಕ ಸೃಷ್ಟಿಸಲು ಯೋಚನೆ ರೂಪಿಸಿದ್ದು, ಈ ಭಯೋತ್ಪಾದಕರಿಗೆ ಕುಮ್ಮಕ್ಕು ನೀಡಿತ್ತು ಎಂದು ಪೊಲೀಸರು ಬಹಿರಂಗ ಪಡಿಸಿದ್ದಾರೆ.

ಯೋಜಿತ ವಿಧ್ವಂಸಕ ಕೃತ್ಯದ ರೂವಾರಿ ಪಾಕಿಸ್ತಾನ ಮೂಲದ ಉಗ್ರ ಮತ್ತು ಗ್ಯಾಂಗ್‌ಸ್ಟಾರ್ ಆಗಿರುವ ರಸೂಲ್ ಖಾನ್ ಎಂದು ಗುರುತಿಸಲಾಗಿದೆ. ಕೇರಳ ಹಾಗೂ ತಮಿಳುನಾಡಿನ ರಾಷ್ಟ್ರೀಯ ಸ್ವಯಂ ಸೇವಾ (ಆರ್‌ಎಸ್‌ಎಸ್) ಸಂಘದ ನಾಯಕರನ್ನು ಗುರಿಯಾಗಿಸಿಕೊಂಡು ಶಂಕಿತ ಭಯೋತ್ಪಾದಕರು ಕಾರ್ಯಾಚರಣೆಗೆ ಇಳಿದಿದ್ದರು ಎಂದು ಮೂಲಗಳು ತಿಳಿಸಿವೆ.

delhi police averts attack in south india arrests 3 isi backed

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ