ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ ಸಚಿವ ಕೃಷ್ಣಭೈರೇಗೌಡ

ಬೆಂಗಳೂರು, ಜ.19- ದೇಶದಲ್ಲಿ ಕಳೆದ ಎರಡು-ಮೂರು ವರ್ಷಗಳಿಂದ ಉದ್ಯೋಗಾವಕಾಶ ಕಡಿಮೆಯಾಗುತ್ತಿದ್ದು, ಉದ್ಯೋಗಾಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಭೆರೇಗೌಡ ತಿಳಿಸಿದರು.
ಸಹಕಾರ ನಗರದಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಯುವ ಸಮುದಾಯದ ನಿರೀಕ್ಷೆಗೆ ತಕ್ಕಂತೆ ಉದ್ಯೋಗಾವಕಾಶ ದೊರೆಯುವಂತಾಗಲು ಉದ್ಯೋಗ ಮೇಳದ ಮೂಲಕ ಸ್ವಲ್ಪಮಟ್ಟಿನ ಪರಿಹಾರ ಒದಗಿಸುವ ಉದ್ದೇಶದಿಂದ ಮೇಳ ಆಯೋಜಿಸಲಾಗಿದೆ ಎಂದರು.

ಈ ಮೂಲಕ ಯುವ ಜನರ ಆತಂಕ ದೂರ ಮಾಡಲು ಉದ್ದೇಶಿಸಿದ್ದು, ಎಸ್‍ಎಸ್‍ಎಲ್‍ಸಿ ಸೇರಿದಂತೆ ವಿವಿಧ ಪದವಿಯಿಂದ ಎಂಜಿನಿಯರ್‍ವರೆಗೂ ಅಭ್ಯಾಸ ಮಾಡಿರುವ ಸಾವಿರಾರು ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಬಂದಿದ್ದಾರೆ.100 ರಿಂದ 115 ಕಂಪೆನಿಗಳು ಇದರಲ್ಲಿ ಪಾಲ್ಗೊಂಡಿದ್ದು, ನಿರುದ್ಯೋಗಿಗಳು ಹಾಗೂ ಕಂಪೆನಿಗಳಿಗೆ ಒಂದೇ ವೇದಿಕೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.ಇದಕ್ಕೆ ಕಾಂಗ್ರೆಸ್ ಮುಖಂಡರು, ಪಾಲಿಕೆ ಸದಸ್ಯರು ಸಹಕಾರ ನೀಡಿದ್ದು, ಅವರಿಗೆ ಧನ್ಯವಾದ ಅರ್ಪಿಸುವುದಾಗಿ ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ