ಅನಿವಾರ್ಯ ಕಾರಣಗಳಿಂದ ಮುಂದೂಡಿದ ಪೊಲೀಯೋ ಲಸಿಕಾ ಕಾರ್ಯಕ್ರಮ

ಬೆಂಗಳೂರು, ಜ.19- 3ನೇ ಫೆಬ್ರವರಿಯಂದು ನಡೆಯಬೇಕಾಗಿದ್ದ ಪೊಲೀಯೋ ಲಸಿಕಾ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಭಾರತ ಸರ್ಕಾರದ ಉಪ ಆಯುಕ್ತರು ಈ ಕುರಿತು ಪತ್ರ ಬರೆದಿದ್ದಾರೆ.ಆದುದರಿಂದ 3ನೇ ಫೆಬ್ರವರಿಯಂದು ನಡೆಯಬೇಕಾಗಿದ್ದ ಪಲ್ಸ್ ಪೊಲೀಯೋ ಲಸಿಕಾ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದ್ದು, ಭಾರತ ಸರ್ಕಾರದಿಂದ ಆದೇಶ ಬಂದ ನಂತರ ಮುಂದಿನ ದಿನಾಂಕ ತಿಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ