ಲೋಕಪಾಲ ನೇಮಕಕ್ಕೆ ವಿಳಂಬ, ಜ.30ರಿಂದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ

ಮುಂಬೈ, ಜ.20- ಲೋಕಾಪಾಲ ನೇಮಕಕ್ಕೆ ವಿಳಂಬ ನೀತಿಅನುಸರಿಸುತ್ತಿರುವ ನರೇಂದ್ರ ಮೋದಿ ನೇತೃತ್ವದಕೇಂದ್ರ ಸರ್ಕಾರದ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಜ.30 ರಿಂದ ಮಹಾರಾಷ್ಟ್ರದ ರಾಲೆಗಣ್ ಸಿದ್ಧಿಯಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.

ಲೋಕಾಯುಕ್ತ ಮತ್ತು ಲೋಕಾಯುಕ್ತ ಕಾಯ್ದೆ 2013 ಪ್ರಕಾರ ಭ್ರಷ್ಟಾಚಾರ ನಿಗ್ರಹ ಒಂಬುಡ್ಸ್‍ಮನ್ ಮತ್ತು ಲೋಕಾಪಾಲ ನೇಮಕಕ್ಕೆ ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ. ದೇಶವನ್ನು ಸರ್ವಾಧಿಕಾರತ್ವ ಆಡಳಿತಕ್ಕೆ ಒಳಪಡಿಸಲು ಪ್ರಯತ್ನಿಸಲಾಗುತ್ತಿದೆಎಂದುಗುಡುಗಿದ್ದಾರೆ.

2013ರಲ್ಲಿ ಲೋಕಾಯುಕ್ತ ಮತ್ತು ಲೋಕಾಪಾಲ್‍ಕಾಯ್ದೆ ಮಾಡಲಾಗಿತ್ತು. ಆ ಬಳಿಕ 2014ರಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂತು. ಅವರು ಐದು ವರ್ಷಗಳಲ್ಲಿ ಏನನ್ನೂ ಮಾಡಿಲ್ಲ, ಭ್ರಷ್ಟಾಚಾರ ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಉಪವಾಸ ಸತ್ಯಾಗ್ರಹಆರಂಭಿಸಲು ನಿರ್ಧರಿಸಿದ್ದೇನೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ 32 ಪತ್ರಗಳನ್ನು ಬರೆದಿದ್ದೆ.ಆದರೆ, ಪ್ರಧಾನಿ ಲೋಕಪಾಲ್‍ ಕುರಿತಾಗಿನ ಯಾವುದೇ ಆಶ್ವಾಸನೆಗಳನ್ನು ಈಡೇರಿಸಲಿಲ್ಲ ಎಂದು ಹಜಾರೆ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ