ಹಾವೇರಿ, ಜ.21-ವೇಗವಾಗಿ ಬರುತ್ತಿದ್ದ ಕಾರೊಂದು ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಣೇಬೆನ್ನೂರು ತಾಲ್ಲೂಕಿನ ಹನುಮಂತನಕಟ್ಟೆ ಬಳಿ ನಡೆದಿದೆ.
ಮೃತರನ್ನು ದಾವಣಗೆರೆ ಮೂಲದ ಸುಮಂತ್(23), ದರ್ಶನ್ (24) ಹಾಗೂ ಸುನಿಲ್ ಎಂದು ತಿಳಿದು ಬಂದಿದ್ದು, ಇವರು ಗೋವಾಗೆ ಪ್ರವಾಸಕ್ಕೆ ತೆರಳಿ ವಾಪಸಾಗುತ್ತಿದ್ದರು ಎಂದು ಹೇಳಲಾಗಿದೆ.
ಕಾರಿನಲ್ಲಿದ್ದ ಇನ್ನಿಬ್ಬರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದು ರಾಣೆಬೆನ್ನೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.