ತುಮಕೂರು,ಜ.21- ಸಿದ್ದಗಂಗಾ ಶ್ರೀಗಳ ನಿಧನ ಎರಡನೇ ಅಭಿನವ ಬಸವಣ್ಣನವರ ಯುಗಾಂತ್ಯವಾದಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಶೋಕ ವ್ಯಕ್ತಪಡಿಸಿದರು.
ಮಠದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರಕೊಡುಗೆ ನೀಡಿರುವ ಶ್ರೀಗಳು ಇಂದು ನಮ್ಮನ್ನು ಅಗಲಿರುವುದು ಅತೀವ ದುಃಖ ತಂದಿದೆ.
ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಶ್ರೀಗಳಿಗೆ ಭಾರತರತ್ನ ಪ್ರಶಸ್ತಿ ಕೊಡಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇವೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.