ತುಮಕೂರು, ಜ.21-ತುಮಕೂರು ಸಿದ್ದಗಂಗಾ ಶ್ರೀಗಳ ನಿಧನದ ಹಿನ್ನೆಲೆಯಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಮಠದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ನಿಧನದ ಗೌರವಾರ್ಥ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾಳೆ ಸಂಜೆ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದರು.
ಶ್ರೀಗಳ ಸೇವೆ ಅಜರಾಮರ.ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಅವರ ಕೊಡುಗೆ ಅನನ್ಯವಾಗಿದೆ ಎಂದು ಸ್ಮರಿಸಿದರು.