ಬೆಂಗಳೂರು, ಜ.21-ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕರಾದ ಆನಂದ್ಸಿಂಗ್ ಅವರ ಹೇಳಿಕೆಯನ್ನು ಪಡೆಯಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಅವರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಯಿಂದ ಬಿಡದಿ ಪೊಲೀಸ್ ಠಾಣೆಗೆ ವರದಿಯೊಂದು ಬಂದಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಆನಂದ್ಸಿಂಗ್ ಅವರ ಹೇಳಿಕೆಯನ್ನು ಪಡೆದ ನಂತರ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.