ತುಮಕೂರು: ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ.
ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ.
ಬೆಳಗ್ಗೆ 11.44ರ ಸುಮಾರಿಗೆ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ನಾಳೆ ಸಂಜೆ 4.30ರ ಸುಮಾರಿಗೆ ಶ್ರೀಗಳ ಕ್ರಿಯಾಸಮಾಧಿ ನಡೆಯಲಿದೆ.






