ಶ್ರೀಗಳಿಗೆ ಭಾರತ ರತ್ನ ನೀಡುವಂತೆ ನೃಪತುಂಗ ಕನ್ನಡ ಸಂಗದ ಮನವಿ

ಬೆಂಗಳೂರು,ಜ.21-ತ್ರಿವಿಧ ದಾಸೋಹಿ, ತುಮಕೂರು ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮಿ ಭಾರತದ ಸರ್ವಶ್ರೇಷ್ಠ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ನೃಪತುಂಗ ಕನ್ನಡ ಪ್ರಗತಿಪರ ಸಂಘ ಮನವಿ ಮಾಡಿದೆ.

ಈಗಾಗಲೇ ಶ್ರೀಗಳಿಗೆ ಭಾರತ ರತ್ನ ನೀಡುವ ಸಂಬಂಧ ನಾಡಿನಾದ್ಯಂತ ಸಹಿ ಸಂಗ್ರಹಿಸಿ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿರುವ ಶ್ರೀಗಳು, ಇಂದಿಗೂ ಪ್ರತಿನಿತ್ಯ ಉಚಿತ ಊಟ, ಶಿಕ್ಷಣ, ವಸತಿ ಸೌಲಭ್ಯ ಕಲ್ಪಿಸುತ್ತಾ ಜನಮನದಲ್ಲಿ ಶಾಶ್ವತವಾಗಿ ಉಳಿದಿರುವ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಸಂಘದ ಪರವಾಗಿ ರಾಜ್ಯಾಧ್ಯಕ್ಷ ಎನ್.ಗಣೇಶಗೌಡ ಮನವಿ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ