ಜ.27ರಂದು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ

ಬೆಂಗಳೂರು, ಜ.22- ಬೆಂಗಳೂರು ನಗರ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್‍ಸ್ಟೇಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜ.27ರಂದು ಬೆಳಗ್ಗೆ 10.30ರಿಂದ 12 ಗಂಟೆಯವರೆಗೆ ನಗರದ 64 ಪರೀಕ್ಷಾ ಕೇಂದ್ರದಲ್ಲಿ ಸುಮಾರು 41,220 ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತಿದೆ.

ಈಗಾಗಲೇ ಅಭ್ಯರ್ಥಿಗಳಿಗೆ ಮಾಹಿತಿಯನ್ನು ಇಲಾಖೆ ವೆಬ್‍ಸೈಟ್  ನಲ್ಲಿ ಬಿಡುಗಡೆ ಮಾಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಕರೆ ಪತ್ರವನ್ನು ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಂಡು ಸರಿಯಾದ ಸಮಯಕ್ಕೆ ಸೂಚಿಸಿದ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಈ ಮೂಲಕ ತಿಳಿಯಪಡಿಸಲಾಗಿದೆ.

ಹೆಚ್ಚಿನ ಮಾಹಿತಿಯನ್ನು ಸದರಿ ವೆಬ್‍ಸೈಟ್‍ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ