
ಮೈಸೂರು, ಜ.22-ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳವು ಮಾಡುತ್ತಿದ್ದ ಇಬ್ಬರು ಮನೆಗಳ್ಳರನ್ನು ಮಂಡಿ ಠಾಣೆ ಪೆÇಲೀಸರು ಬಂಧಿಸಿ 2.32 ಲಕ್ಷ ರೂ.ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ವಾಲ್ಮೀಕಿ ನಗರದ ನಿವಾಸಿ ಇಮ್ರಾನ್ ಖಾನ್(32) ಬೆಂಗಳೂರಿನ ನಾಯಂಡಹಳ್ಳಿ ನಿವಾಸಿ ಖದೀರ್ ಅಹಮ್ಮದ್ (29) ಬಂಧಿತರು.
ಬಂಧಿತರು ಬೀಗ ಹಾಕಿರುವ ಮನೆಗಳನ್ನು ಗುರುತಿಸಿಕೊಂಡು ಬೀಗ ಒಡೆದು ಕಳ್ಳತನ ಮಾಡುತ್ತಿದ್ದಾಗ ವಿಚಾರಣೆ ವೇಳೆ ಪೆÇಲೀಸರಿಗೆ ತಿಳಿಸಿದ್ದಾರೆ.
ಬಂಧಿತರಿಂದ 2.32 ಲಕ್ಷ ರೂ. ಮೌಲ್ಯದ 85 ಗ್ರಾಂ ಚಿನ್ನಾಭರಣ, 560ಗ್ರಾಂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಮಂಡಿ ಹಾಗೂ ಲಷ್ಕರ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಗಳ್ಳತನ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ.
ಇನ್ಸ್ಪೆಕ್ಟರ್ ಅರುಣ್, ಎಎಸ್ಐ ಗುರುಸ್ವಾಮಿ, ಸಿಬ್ಬಂದಿಗಳಾದ ವಿಜಯಕುಮಾರ್, ಜಯಪಾಲ, ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿದ್ದರು.