ಬಸ್ಸಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

ದಾವಣಗೆರೆ, ಜ.22-ಕೆಎಸ್‍ಆರ್‍ಟಿಸಿ ಬಸ್‍ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಸಂಚಾರಿ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಹಳೆಕುಂದವಾಡ ಗ್ರಾಮದ ನಿವಾಸಿ ವೆಂಕಟೇಶ್(34) ಮೃತಪಟ್ಟ ದುರ್ದೈವಿ.
ಈತ ಮೇಸ್ತ್ರೀ ಕೆಲಸ ಮಾಡುತ್ತಿದ್ದು, ನಿನ್ನೆ ಕೆಲಸ ಮುಗಿಸಿಕೊಂಡು ಬೈಕ್‍ನಲ್ಲಿ ಮನೆಗೆ ತೆರಳುವಾಗಿ ಟಿ.ಬಿ.ರಸ್ತೆಯ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಕೆಎಸ್‍ಆರ್‍ಟಿಸಿ ಬಸ್‍ಗೆ ಬೈಕ್ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ವೆಂಕಟೇಶ್ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಉತ್ತರ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ