ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆ

ಬೆಂಗಳೂರು, ಜ.22-ನಾಳೆ ನಡೆಯಬೇಕಿದ್ದ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಶಾಸಕ ವೈ.ಎಸ್.ವಿ.ದತ್ತ ಅಧಿಕಾರ ಸ್ವೀಕಾರ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಭಕ್ತರ ಪಾಲಿನ ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರು ಲಿಂಗೈಕ್ಯರಾಗಿರುವ ಹಿನ್ನೆಲೆಯಲ್ಲಿ ನಾಳೆ ಜೆ.ಪಿ.ಭವನದಲ್ಲಿ ನಡೆಯಬೇಕಿದ್ದ ಅಧಿಕಾರ ಸ್ವೀಕಾರ ಸಮಾರಂಭವನ್ನು ಮುಂದೂಡಲಾಗಿದೆ ಎಂದು ವೈ.ಎಸ್.ವಿ.ದತ್ತ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ