ಬೆಂಗಳೂರು, ಜ.22- ಶಿವೈಕ್ಯರಾಗಿರುವ ಸಿದ್ಧಗಂಗಾ ಮಠದ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಯೋಗಗುರು ಬಾಬಾ ರಾಮ್ದೇವ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತ್ರಿವಿಧ ದಾಸೋಹಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಯವರಿಗೆ ಭಾರತ ರತ್ನ ನೀಡುವುದರಿಂದ ಪ್ರಶಸ್ತಿಯ ಗೌರವ ಹೆಚ್ಚಾಗಲಿದೆ ಎಂದರು.
ಕ್ರೀಡೆ, ಸಂಗೀತ, ರಾಜಕೀಯ ಕ್ಷೇತ್ರದ ಗಣ್ಯರು ಭಾರತ ರತ್ನ ಪ್ರಶಸ್ತಿ ನೀಡುವುದಾದರೆ ತ್ರಿವಿಧ ದಾಸೋಹಿ ಶ್ರೀಗಳಿಗೆ ಏಕೆ ನೀಡಬಾರದು ಎಂದು ಅವರು ಪ್ರಶ್ನಿಸಿದರು.
ನಂತರ ತುಮಕೂರಿನ ಸಿದ್ಧಗಂಗಾ ಮಠಕ್ಕೆ ತೆರಳಿ ಲಿಂಗೈಕ್ಯರಾದ ಶ್ರೀ ಶಿವಕುಮಾರ ಸ್ವಾಮೀಜಿಯವರ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು.