ರಾಜ್ಯದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದೆ; ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಜ.23-ರಾಜ್ಯ ಸರ್ಕಾರದಲ್ಲಿ ಹಣದ ಕೊರತೆ ಇಲ್ಲ, ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಆದಿಚುಂಚನಗಿರಿ ಮಠದ ವಿಜಯನಗರ ಶಾಖಾ ಮಠದಲ್ಲಿ ನಡೆದ ಟಿ.ನರಸೀಪುರದಲ್ಲಿ ನಡೆಯಲಿರುವ ಕುಂಭ ಮೇಳದ ಪೂರ್ವ ಸಿದ್ಧತಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡಲು ಸರ್ಕಾರ ಮುಂದಾಗಿರುವುದರಿಂದ ರಾಜ್ಯ ಸರ್ಕಾರದಲ್ಲಿ ಇತರೆ ಕಾರ್ಯಕ್ರಮಗಳಿಗೆ ಹಣವಿಲ್ಲ ಎಂಬ ಟೀಕೆಗಳು ವ್ಯಕ್ತವಾಗಿವೆ. ಆದರೆ ಅದು ಆಧಾರರಹಿತ ಎಂದರು.

ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಅನಾಹುತ ಉಂಟದಾಗ ರಾಜ್ಯ ಸರ್ಕಾರ ತಕ್ಷಣವೇ 200 ಕೋಟಿ ಬಿಡುಗಡೆ ಮಾಡಿ ಜನರ ಸಂಕಷ್ಟಕ್ಕೆ ಸ್ಪಂದಿಸಿತ್ತು ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ