ನೇತಾಜಿ ಸುಭಾಷ್‌ ಚಂದ್ರ ಬೋಸ್‌ 122ನೇ ಜನ್ಮ ದಿನ: ರಾಷ್ಟ್ರಪತಿ, ಪ್ರಧಾನಿಯಿಂದ ಗೌರವ ನಮನ

ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಸುಭಾಷ್‌ ಚಂದ್ರ ಬೋಸ್‌ ಅವರ 122ನೇ ಜನ್ಮ ದಿನದ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ಪ್ರಧಾನ ಮಂತ್ರಿ ನರೇಂದ್ರ ಮೋದಿ ಗೌರವ ಸಲ್ಲಿಸಿದರು.

ಈ ವೇಳೆ ಟ್ವೀಟ್ ಮಾಡಿರುವ ರಾಷ್ಟ್ರಪತಿ ಕೋವಿಂದ್ , ಜನ್ಮ ವಾರ್ಷಿಕೋತ್ಸವ ಅಂಗವಾಗಿ ನೇತಾಜಿ ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರು ದೇಶದ ಅತ್ಯಂತ ಪ್ರೀತಿ ಪಾತ್ರ ರಾಷ್ಟ್ರೀಯ ನಾಯಕರಲ್ಲಿ ಒಬ್ಬರಾಗಿದ್ದಾರೆ ಮತ್ತು ಸ್ವಾತಂತ್ರ್ಯ ಹೋರಾಟದ ಸಂಕೇತವಾಗಿದ್ದಾರೆ. ನೇತಾಜಿ ಅವರನ್ನು ಅನುಸರಿಸಲಾಗುತ್ತದೆ, ನೆನಪಿಸಿಕೊಳ್ಳಲಾಗುತ್ತದೆ ಮತ್ತು ಇಂದಿನ ದಿನ ದೇಶ ಅವರನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಕೂಡ ಟ್ವೀಟ್‌ ಮಾಡಿದ್ದು, ನೇತಾಜಿ ಸುಭಾಷ್‌ ಚಂದ್ರ ಬೋಸ್‌ರ ಜನ್ಮ ದಿನ ಹಿನ್ನಲೆಯಲ್ಲಿ ಅವರಿಗೆ ಶಿರಬಾಗುತ್ತೇನೆ. ಅವರು ಭಾರತವನ್ನು ಸ್ವಾತಂತ್ರ್ಯಗೊಳಿಸುವಲ್ಲಿ ಅಗ್ರಗಣ್ಯ ಮತ್ತು ಘನತೆಯ ಜೀವನವನ್ನು ನಡೆಸಿದ್ದರು. ನಾವು ಅವರ ಆದರ್ಶಗಳನ್ನು ಪೂರೈಸಲು ಮತ್ತು ಬಲಿಷ್ಠ ಭಾರತ ನಿರ್ಮಾಣವನ್ನು ಸಾಕಾರಗೊಳಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

ನೇತಾಜಿಯವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ಮೋದಿ ಅವರಿಂದು ದೆಹಲಿಯ ಕೆಂಪುಕೋಟೆಯಲ್ಲಿ ಬೋಸ್‌ರ ಮತ್ತು ಭಾರತೀಯ ಸೇನೆಯ ವಸ್ತುಸಂಗ್ರಹಾಲಯವನ್ನು ಉದ್ಘಾಟಿಸಿದರು.
President Kovind, PM Modi pay homage to Subhas Chandra Bose on birth anniversary

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ