ಉತ್ತರ ಪ್ರದೇಶ ಪೂರ್ವ ವಿಭಾಗದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪ್ರೀಯಾಂಕಾ ಗಾಂಧಿ ನೇಮಕ

ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಗಾಂಧಿ ಪದಾರ್ಪಣೆ ಮಾಡಲಿದ್ದು, ಉತ್ತರ ಪ್ರದೇಶ ಪೂರ್ವ ವಿಭಾಗಕ್ಕೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಾಂಗ್ರೆಸ್ ನ ಪ್ರಧಾನ ಉಸ್ತುವಾರಿ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಈ ಮೂಲಕ ಪ್ರಿಯಾಂಕಾ ಗಾಂಧಿಗೆ ಇದೇ ಮೊದಲ ಬಾರಿಗೆ ಪಕ್ಷದಲ್ಲಿ ಅಧಿಕೃತ ಹುದ್ದೆಯೊಂದನ್ನು ನೀಡಿದಂತಾಗಿದೆ.ಪೂರ್ವ ವಿಭಾಗದ ಉಸ್ತುವಾರಿ ನೋಡಿಕೊಳ್ಳುವ ಹೊಣೆ ಹೊತ್ತ ಪ್ರಿಯಾಂಕಾ ಪ್ರಧಾನಿ ಮೋದಿ ಕ್ಷೇತ್ರವಾದ ವಾರಣಾಸಿಯಲ್ಲಿ ಸಹ ಪ್ರಚಾರ ಕಾರ್ಯ ನಡೆಸಲಿದ್ದಾರೆ.

ಕೆಸಿ ವೇಣುಗೋಪಾಲ್ ಅವರನ್ನು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಇನ್ನು ಜೋತಿರಾದಿತ್ಯ ಸಿಂಧಿಯಾ ಅವರನ್ನು ಉತ್ತರ ಪ್ರದೇಶ ಪಶ್ಚಿಮ ವಿಭಾಗದ ಕಾಂಗ್ರೆಸ್ ಪ್ರಧಾನ ಉಸ್ತುವಾರಿ ಕಾರ್ಯದರ್ಶಯನ್ನಾಗಿಯೂ, ಗುಲಾಂ ನಬಿ ಆಜಾದ್ ಅವರನ್ನು ಹರಿಯಾಣದ ಉಸ್ತುವಾರಿಯನ್ನಾಗಿಯೂ ನೇಮಕ ಮಾಡಲಾಗಿದೆ.

Priyanka Gandhi Vadra Appointed Congress General Secretary For Uttar Pradesh (East)

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ