ಗುರುಗ್ರಾಮದಲ್ಲಿ ಕಟ್ಟಡ ಕುಸಿತ: ಏಳು ಜನ ಸಿಲುಕಿರುವ ಶಂಕೆ

ಹರಿಯಾಣ: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಹಲವರು ಸಿಲುಕಿರುವ ಘಟನೆ ಹರಿಯಾಣದ ಗುರುಗ್ರಾಮದ ಉಲ್ಲವಾಸ್ ಗ್ರಾಮದಲ್ಲಿ ನಡೆದಿದೆ.

ಕಟ್ಟಡದ ಅವಶೇಷಗಳ ಅಡಿಯಲ್ಲಿ 7 ಮಂದಿ ಸಿಲುಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು ಇದುವರೆಗೂ ಯಾವುದೇ ಮೃತ ದೇಹ ಪತ್ತೆಯಾಗಿಲ್ಲ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಮೂರು ತಂಡಗಳು ಘಟನಾ ಸ್ಥಳಕ್ಕೆ ಆಗಮಿಸಿ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Gurugram, building collapse: 7 feared trapped

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ