ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ದತ್ತ

ಬೆಂಗಳೂರು,ಜ.24-ತೀವ್ರ ಎದೆನೋವು ಹಿನ್ನೆಲೆಯಲ್ಲಿ ನಗರದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕ ಹಾಗೂ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈ.ಎಸ್.ವಿ.ದತ್ತ ಚೇತರಿಸಿಕೊಳ್ಳುತ್ತಿದ್ದಾರೆ.

ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ದತ್ತ ಅವರಿಗೆ ಈ ಹಿಂದೆ ಸ್ಟಂಟ್ ಅಳವಡಿಸಲಾಗಿತ್ತು.

ಕಳೆದ ಮಂಗಳವಾರ ಆಟೋದಲ್ಲಿ ಬರುತ್ತಿದ್ದಾಗ ಜೆಡಿಎಸ್ ಕಚೇರಿ ಬಳಿ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದ ಅವರನ್ನು ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಗತ್ಯ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ