ಗಣರಾಜ್ಯೋತ್ಸವಕ್ಕೆ ಅತಿಥಿಯಾಗಿ  ಆಗಮಿಸಿದ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್​ ರಾಮಫೊಸ: ಮಹಾತ್ಮಗಾಂಧಿ ಸ್ಮಾರಕಕ್ಕೆ ನಮನ

ನವದೆಹಲಿ: ಗಣರಾಜ್ಯೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸಿರುವ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್​ ರಾಮಫೊಸ ಅವರು ನವದೆಹಲಿಯ ರಾಜ್​ಘಾಟ್ ಗೆ ಭೇಟಿ ನೀಡಿ, ರಾಷ್ಟ್ರಪಿತ ಮಹಾತ್ಮಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದರು.

ಭಾರತದ ಆಹ್ವಾನದ ಮೇರೆಗೆ ರಾಮಫೊಸ ಅವರು ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾರೆ. ಅವರಿಗೆ ರಾಷ್ಟ್ರಪತಿ ಭವನದಲ್ಲಿ ಗಾರ್ಡ್​ ಆಫ್​ ಹಾನರ್​ ಅನ್ನು ಸಹ ನೀಡಿ ಗೌರವಿಸಲಾಗಿದೆ.

ನಾಳಿನ ಗಣರಾಜ್ಯೋತ್ಸವದ ವಿವಿಧ ಕಾರ್ಯಕ್ರಮಗಳಲ್ಲಿ ರಾಮಫೊಸ ಭಾಗವಹಿಸಲಿದ್ದಾರೆ. ಈ ವೇಳೆ ಉಭಯ ದೇಶಗಳ ನಡುವೆ ಮಹತ್ವದ ಮಾತುಕತೆಗಳು ಸಹ ನಡೆಯಲಿವೆ ಎಂದು ತಿಳಿದುಬಂದಿದೆ.

South African President Ramaphosa, chief guest at Republic Day parade,pays tribute,Mahatma Gandhi at Raj ghat

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ