ರಾಷ್ಟ್ರೀಯ ಮತದಾರರ ದಿನಾಚರಣೆಗೆ ಶುಭ ಕೋರಿಕೆ

Varta Mitra News

ಬಾಗಲಕೋಟೆ: ಜನವರಿ 25 ರಂದು ಆಚರಿಸಲ್ಪಡುವ ರಾಷ್ಟ್ರೀಯ ಮತದಾರರ ದಿನಾಚರಣೆಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಗಂಗೂಬಾಯಿ ಮಾನಕರ ಜಿಲ್ಲೆಯ ಜನತೆಗೆ ಶುಭ ಕೋರಿದ್ದಾರೆ.
ಚುನಾವಣೆಗಳು ಪ್ರಜಾಪ್ರಭುತ್ವದ ಸಂಭ್ರಮಾಚರಣೆ ಎಂದು ಬಣ್ಣಿಸಿ ಪ್ರತಿಯೊಬ್ಬ ಅರ್ಹ ಮತದಾರರೂ ತಮ್ಮ ಹಕ್ಕು ಚಲಾವಣೆ ಮಾಡಬೇಕು. ಮತ್ತು 18 ವರ್ಷ ತುಂಬಿದ ಯುವಕರು ಮತದಾರರಾಗಿ ನೋಂದಣಿ ಮಾಡಿಕೊಳ್ಳಬೇಕು. ಜನವರಿ 25 ರಾಷ್ಟ್ರೀಯ ಮತದಾರರ ದಿನದಂದು ನಿಮ್ಮೆಲ್ಲರಿಗೂ ಶುಭ ಕೋರುತ್ತಾ, ನಾವೆಲ್ಲರೂ ಚುನಾವಣಾ ಆಯೋಗಕ್ಕೆ ಶುಭಕೋರೋಣ. ಮತ್ತು ನಮ್ಮ ಪ್ರಜಾಪ್ರಭುತ್ವದಲ್ಲಿ ಅವರ ಮಹತ್ವದ ಪಾತ್ರಕ್ಕೆ ವಂದಿಸೋಣ.
ಚುನಾವಣೆಗಳು ಪ್ರಜಾಪ್ರಭುತ್ವದ ಸಂಭ್ರಮಾಚರಣೆ. ಅವು ಜನತೆಯ ಇಚ್ಚೆಯನ್ನು ಸಂವಹನ ಮಾಡುತ್ತದೆ. ಇದು ಪ್ರಜಾಪ್ರಭುತ್ವದಲ್ಲಿ ಸರ್ವೋನ್ನತವಾಗಿದೆ. ಪ್ರತಿಯೊಬ್ಬ ಅರ್ಹ ಮತದಾರರಿಗೂ ತಮ್ಮ ಹಕ್ಕು ಚಲಾಯಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಮತ್ತು 18 ವರ್ಷ ತುಂಬಿದ ತರುವಾಯ ಮತದಾರರಾಗಿ ನೋಂದಣಿ ಮಾಡಿಕೊಳ್ಳುವಂತೆ ಯುವ ಜನತೆಗೆ ಕರೆ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ