ಗಣರಾಜ್ಯೋತ್ಸವ : ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಕಾರ್ಯಕ್ರಮ

Varta Mitra News

ಬಾಗಲಕೋಟೆ:  ಜಿಲ್ಲಾಡಳಿತ ವತಿಯಿಂದ ಜನವರಿ 26 ರಂದು ಗಣರಾಜ್ಯೋತ್ಸವ ಅಂಗವಾಗಿ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 9 ಗಂಟೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರಿಂದ ಧ್ವಜಾರೋಹಣ, ಪೊಲೀಸ್ ಬ್ಯಾಂಡ್‍ನಿಂದ ರಾಷ್ಟ್ರಗೀತೆ, ಜಿಲ್ಲಾ ಉಸ್ತುವಾರಿ ಸಚಿವರಿಂದ ಪರೇಡ ವೀಕ್ಷಣೆ ನಂತರ ಪೊಲೀಸ್, ಗೃಹ ರಕ್ಷಕದಳ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‍ಸಿಸಿ ಹಾಗೂ ಶಾಲಾ ಮಕ್ಕಳಿಂದ ಪಥ ಸಂಚಲನ ನಂತರ ಜಿಲ್ಲಾ ಉಸ್ತುವಾರಿ ಸಚಿವರಿಂದ ಗಣರಾಜ್ಯೋತ್ಸವದ ಸಂದೇಶ, ಶಾಲಾ ಮಕ್ಕಳಿಂದ ರೈತಗೀತೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಸನ್ಮಾನ ಹಾಗೂ ಸರ್ವೋತ್ತಮ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ನಂತರ ಸಂಜೆ 5.30ಕ್ಕೆ ನವನಗರದ ಕಲಾಭವನದಲ್ಲಿ ವಿವಿಧ ಶಾಲಾ ಕಾಲೇಜು ಮಕ್ಕಳಿಂದ ದೇಶಭಕ್ತಿಗೀತೆ, ನೃತ್ಯ ರೂಪಕಗಳು ಜರುಗಲಿವೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ವೀರಣ್ಣ ಚರಂತಿಮಠ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಬಾದಾಮಿ ಶಾಸಕ ಸಿದ್ದರಾಮಯ್ಯ, ಜಿ.ಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ, ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ಜಿಲ್ಲೆಯ ವಿವಿಧ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರ ಗಣ್ಯಮಾನ್ಯರು ಆಗಮಿಸಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ