ಬೆಂಗಳೂರು, ಜ.25- ಪಶು ವೈದ್ಯಕೀಯ ಇಲಾಖೆಯಲ್ಲಿನ ಖಾಲಿ ಇರುವ ಹುದ್ದೆಗಳಿಗೆ ಡಿಪೆÇ್ಲಮಾ ಪೂರೈಸಿದವರಿಗೆ ನೀಡಬೇಕು ಎಂದು ಕರ್ನಾಟಕ ರಾಜ್ಯ ಡಿಪೆÇ್ಲಮಾ ಪಶುಸಂಗೋಪನಾ ಪದವೀಧರರ ಸಂಘ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಜಯ ಪ್ರಕಾಶ ಹುದಲಿ ಮಾತನಾಡಿ, ಸರಕಾರದ ಆದೇಶದಂತೆ ತುಮಕೂರು ಮತ್ತು ಹಾವೇರಿ ಜಿಲ್ಲೆಯಲ್ಲಿ ಪಶು ಸಂಗೋಪನಾ ಡಿಪೆÇ್ಲಮಾ ಕಾಲೇಜುಗಳನ್ನು ತೆರೆಯಲಾಗಿದೆ ಎಂದರು.
ಐದು ರಾಜ್ಯ ಪಶು ವೈದ್ಯಕೀಯ ಕಾಲೇಜುಗಳಲ್ಲಿ ಅರೆಕಾಲಿಕ ಹುದ್ದೆಗಳನ್ನು ನೇಮಕ ಮಾಡಲಾಗುತ್ತಿದೆ. ಈಗಾಗಲೇ ಈ ಕಾಲೇಜುಗಳಿಂದ 550 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಸುಮಾರು ಎಂಟು ವರ್ಷ ಕಳೆದರೂ ಇಲಾಖೆಯಲ್ಲಿ ನೇಮಕಾತಿ ನಡೆದಿಲ್ಲ. ಕೂಡಲೇ ಉದ್ಯೋಗಾವಕಾಶ ಕಲ್ಪಿಸಬೇಕು ಇಲ್ಲವೇ ಕಾಲೇಜುಗಳನ್ನು ಮುಚ್ಚಬೇಕು ಎಂದು ಹೇಳಿದರು.