ನಾಳೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 188ನೇ ಸ್ಮರಣೋತ್ಸವ

ಬೆಂಗಳೂರು,ಜ.25- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 188ನೇ ಸ್ಮರಣೋತ್ಸವದ ಅಂಗವಾಗಿ ನಾಳೆ ನಗರದ ದೇವರಾಜ ಅರಸು ವೃತ್ತದಲ್ಲಿರುವ ಸಂಗೊಳ್ಳಿ ರಾಯಣ್ಣ ಪುತ್ಥಳಿ ಬಳಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ವೀರ ಸೇನಾನಿ, ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿ ಮಡಿದ ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಲಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಮೇಯರ್ ಗಂಗಾಂಬಿಕ ಮಲ್ಲಿಕಾರ್ಜುನ್, ವಾಟಾಳ್ ನಾಗರಾಜ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಎಚ್.ಎಂ.ರೇವಣ್ಣ, ಸಾಹಿತಿ ಬರಗೂರು ರಾಮಚಂದ್ರಪ್ಪ, ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ಮುಂತಾದವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನ ಪ್ರಕಟಣೆಯಲ್ಲಿ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ