ಗಣರಾಜ್ಯೋತ್ಸವ ಸಂಭ್ರಮದ ವೇಳೆ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಗಣರಾಜ್ಯೋತ್ಸವದ ಸಂಭ್ರಮದ ವೇಳೆ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಜೈಶ್ ಎ ಮೊಹಮ್ಮದ್(ಜೆಇಎಂ) ಉಗ್ರಗಾಮಿ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಸದೆಬಡಿದಿವೆ.

ಶ್ರೀನಗರ ಜಿಲ್ಲೆಯ ಹೊರವಲಯದ ಖೋನ್ ಮೋಹ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಇಬ್ಬರ ಬಳಿ ಇದ್ದ ಎಕೆ 47 ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದು, ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ರಾಷ್ಟ್ರೀಯ ರೈಫಲ್ಸ್ ನ ಸಿಬ್ಬಂದಿಗಳು, ವಿಶೇಷ ಕಾರ್ಯಾಚರಣೆ ಪಡೆ(ಎಸ್ ಓಜಿ) ಹಾಗೂ ಕಾಶ್ಮೀರ ಪೊಲೀಸರು, ಸಿಆರ್ ಪಿಎಫ್ ಸಿಬ್ಬಂದಿಗಳು ಜೊತೆಯಾಗಿ ಕಾರ್ಯಾಚರಣೆ ನಡೆಸಿದ್ದಾರೆ.

2 Terrorists Shot, Planned Attack On Srinagar Republic Day Event

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ