ಐಆರ್​ಸಿಟಿಸಿ ಹಗರಣ: ಲಾಲು ಪ್ರಸಾದ್ ಯಾದವ್, ರಾಬ್ರಿ ದೇವಿ, ತೇಜಶ್ವಿ ಯಾದವ್ ಗೆ ಜಾಮೀನು

ನವದೆಹಲಿಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾವ್, ಪತ್ನಿ ರಾಬ್ರಿ ದೇವಿ ಮತ್ತು ಪುತ್ರ ತೇಜಸ್ವಿ ಯಾದವ್ ಅವರಿಗೆ ಜಾಮೀನು ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಐಆರ್​ಸಿಟಿಸಿ ಹಗರಣ ಸಂಬಂಧ ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಎರಡು ಪ್ರಕರಣಗಳಲ್ಲಿ ಆರ್​​ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸೇರಿ ಮೂವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ದೆಹಲಿ ನ್ಯಾಯಾಲಯ ಜನವರಿ 28ರವರೆಗೆ ವಿಸ್ತರಣೆ ಮಾಡಿ ಆದೇಶಿಸಿದೆ.

ಕಳೆದ ಡಿಸೆಂಬರ್ ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ಜಾಮೀನು ನೀಡಿದ್ದ ಪಟಿಯಾಲಾ ಹೌಸ್ ನ್ಯಾಯಾಲಯ, ಇದೀಗ ಜಾಮೀನು ನೀಡಿದೆ. 2006 ರಲ್ಲಿ ಇಂಡಿಯನ್ ರೈಲ್ವೇ ಕೇಟರಿಂಗ್ ಅಂಡ್ ಟೂರಿಸಮ್ ಕಾರ್ಪೋರೇಶನ್ ಹೊಟೇಲ್ ಗಳಿಗೆ ಟೆಂಡರ್ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಅವ್ಯವಹಾರ ನಡೆದಿತ್ತು.

ಈ ಸಂಬಂಧ ಸಲ್ಲಿಸಲಾದ ಅರ್ಜಿಗಳನ್ನು ಇಂದು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಅರುಣ್ ಭಾರದ್ವಾಜ್, ಈ ಮೂವರಿಗೆ ನೀಡಲಾಗಿದ್ದ ಜಾಮೀನು ಅವಧಿಯನ್ನು ವಿಸ್ತರಿಸಿದ್ದಾರೆ.  ಜ.28 ರಂದು ಲಾಲು ಮತ್ತಿತರರ ಸಾಮಾನ್ಯ ಜಾಮೀನು ಅರ್ಜಿಗಳ ಬಗ್ಗೆ ನ್ಯಾಯಾಲಯ ತನ್ನ ಆದೇಶವನ್ನು ಪ್ರಕಟಿಸಲಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ