ನಮ್ಮ ಸಂಸ್ಕೃತಿ ಪರಂಪರೆ ವಿಶ್ವಕ್ಕೆ ಮಾದರಿಯಾಗಿದೆ: ಕೇಂದ್ರ ಸಚಿವ ಸದಾನಂದಗೌಡ

ಕೆಂಗೇರಿ,ಜ.28-ಸಮಾಜದ ಮುಖ್ಯವಾಹಿನಿಯಿಂದ ದೂರ ಉಳಿದಿರುವ ಸಣ್ಣ,ಸಣ್ಣ ಸಮುದಾಯಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಪ್ರಗತಿಗೆ ಕೊಡುಗೆ ನೀಡುವ ಮೂಲಕ ಅವರ ಅಭ್ಯುದಯಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸಬೇಕಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದರು.

ಬೆಂಗಳೂರು ದಕ್ಷಿಣ ತಾಲೂಕು ಎಸ್.ಗೊಲ್ಲಹಳ್ಳಿ ಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಕ್ಷತ್ರಿಯ ತಿಗಳರ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ದೇಶದಲ್ಲಿ ವಿವಿಧ ಸಮುದಾಯ,ಧರ್ಮ,ಸಂಸ್ಕøತಿಗಳಿವೆ ಆದರೂ ವಿವಿಧತೆಯಲ್ಲಿ ಏಕತೆಯನ್ನು ಸಾರಿ ವಿಶ್ವಕ್ಕೆ ಮಾದರಿಯಾಗಿರುವ ನಮ್ಮ ಸಂಸೃತಿ ಪರಂಪರೆ ಶ್ರೇಷ್ಠ ಮಟ್ಟದ್ದಾಗಿದೆ ಎಂದರು.

ಪಾಶ್ಚೀಮಾತ್ಯ ಸಂಸ್ಕøತಿಗೆ ಮಾರು ಹೋಗುತ್ತಿರುವ ಯುವ ಸಮುದಾಯ ನಮ್ಮ ಸಂಸ್ಕøತಿ,ಆಚಾರ ವಿಚಾರಗಳ ಬಗ್ಗೆ ಅರಿವು ಮೂಡಿಸಿಕೊಂಡು ಜೀವನ ಕ್ರಮದಲ್ಲಿ ಅಳವಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಕೇಂದ್ರ ಸರ್ಕಾರ ಎಲ್ಲಾ ಸಮುದಾಯಗಳ ಪ್ರಗತಿಗೆ ಯೋಜನೆ ರೂಪಿಸಿ ಅನುಷ್ಠಾನಗೊಳಿಸಿದೆ ಎಂದರು.ತಿಗಳ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಎರಡು ಎಕರೆ ಜಮೀನು ಮಂಜೂರು ಮಾಡಿಸಲು ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಿದರು.

ಬಿ.ಬಿ.ಎಂ.ಪಿ.ಯ ಮಾಜಿ ವಿರೋಧ ಪಕ್ಷದ ನಾಯಕ ಎ.ಹೆಚ್. ಬಸವರಾಜು ಮಾತನಾಡಿ ನಮ್ಮ ಸಮುದಾಯ ನಾಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ್ದ ಮನಗಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿ.ಜೆ.ಪಿ ಸರ್ಕಾರ ತೋಟಗಾರಿಕೆ ಅಭಿವೃದ್ಧಿ ಮಂಡಳಿ ನಿರ್ಮಾಣಕ್ಕೆ ಮುಂದಾಗಿದ್ದರೂ ಅಧಿಕಾರಿಗಳ ನಿರ್ಲಷದಿಂದ ಅದು ಕಾರ್ಯಗತವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಮುದಾಯದ ಏಳಿಗೆಗೆ ಸರ್ಕಾರ, ರಾಜಕೀಯ ಪಕ್ಷಗಳು ಸಹಕಾರ ನೀಡಬೇಕೆಂದು ಮನವಿ ಮಾಡಿದರು.ಆಪ್ ಕಾಮ್ಸ್‍ನ ನಿರ್ದೇಶಕ ಎಂ.ಜೈರಾಜ್. ಶ್ರೀ.ಕೋಡಿ ಕೆಂಪಮ್ಮದೇವಿ ದೇವಸ್ಥಾನ ಅಧ್ಯಕ್ಷ ಎಸ್.ಆರ್.ಸೋಮಶೇಖರ್,ಕಾಂಗ್ರೆಸ್ ಮುಖಂಡ ಬ್ಯಾಲಾಳು ರೇವಣ್ಣಸಿದ್ದಪ್ಪ, ಸಂಘದ ಪದಾಧಿಕಾರಿ ರಮೇಶ್, ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ