ಮೈಸೂರು, ಜ.28-ಕಾಂಗ್ರೆಸ್ ಶಾಸಕರ ವರ್ತನೆ ಮಿತಿಮೀರಿದರೆ ರಾಜೀನಾಮೆ ನೀಡುವುದಾಗಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಕುರಿತು ಮೈಸೂರಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿ.ಎಂ.ಸಿದ್ದರಾಮಯ್ಯ, ಈ ಬಗ್ಗೆ ನನಗೆ ಗೊತ್ತಿಲ್ಲ. ನಾನು ಕುಮಾರಸ್ವಾಮಿ ಅವರ ಜತೆ ಮಾತನಾಡುತ್ತೇನೆ. ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಜೆಡಿಎಸ್‍ನವರು ಸಿಎಂ ಆಗಬೇಕೆಂದು ನಿರ್ಧರಿಸಿದ್ದೇವೆ. ನಾನು ಮುಖ್ಯಮಂತ್ರಿಯಾಗುವ ಪ್ರಶ್ನೆ ಉದ್ಭವಿಸಿಲ್ಲ ಎಂದು ಹೇಳಿದರು.
ಕುಮಾರಸ್ವಾಮಿ ಹೇಳಿಕೆ ಬಗ್ಗೆ ನನಗೆ ಮಾಹಿತಿ ಇಲ್ಲ. ಅವರೊಂದಿಗೆ ನಾನು ಮಾತನಾಡುತ್ತೇನೆ. ಯಾವುದೇ ಗೊಂದಲವಿಲ್ಲ, ಅವರನ್ನು ಇವರನ್ನು ಕೇಳಿ ಕೇಳಿ ನೀವೇ ಗೊಂದಲ ಸೃಷ್ಟಿಸುತ್ತಿದ್ದೀರ ಎಂದು ಮಾಧ್ಯಮದವರ ವಿರುದ್ಧವೇ ಹರಿಹಾಯ್ದರು.
ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ಮಂತ್ರಿಯಾಗಲು ನಾಲಾಯಕ್. ಕೈ ಕಡಿಯಿರಿ, ಕಾಲು ಕಡಿಯಿರಿ ಎಂದು ಹೇಳುವವರು ಮಂತ್ರಿಯಾಗಲು ಲಾಯಕ್ಕೇ ಎಂದು ಪ್ರಶ್ನಿಸಿದರು.