
ಬೆಂಗಳೂರು, ಜ.29-ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಜಾರ್ಜ್ ಫರ್ನಾಂಡೀಸ್ ಅವರು ಸಮಾಜವಾದಿಯಾಗಿದ್ದರು. ಪ್ರಮುಖ ರಾಜಕೀಯ ಮುಖಂಡರಾಗಿದ್ದರು. ಕೊಂಕಣ ರೈಲ್ವೆ ಯೋಜನೆಗೆ ಇವರ ಕೊಡುಗೆ ಮಹತ್ವದ್ದು, ಇದನ್ನು ಜನತೆ ಎಂದಿಗೂ ಮರೆಯುವುದಿಲ್ಲ ಎಂದು ಸಂತಾಪದಲ್ಲಿ ಸೂಚಿಸಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಕೋರಿ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಶೋಕ ವ್ಯಕ್ತಪಡಿಸಿದ್ದಾರೆ.