
ಬೆಂಗಳೂರು, ಜ.29- ಮಾಜಿ ರಕ್ಷಣಾ ಸಚಿವರು, ಕನ್ನಡಿಗರೇ ಆದ ಜಾರ್ಜ್ ಫರ್ನಾಂಡಿಸ್ ಅವರ ನಿಧನ ಅತ್ಯಂತ ನೋವು ತರಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಶೋಕ ವ್ಯಕ್ತಪಡಿಸಿದ್ದಾರೆ.
ವಾಜಪೇಯಿ ಅವರ ಸಂಪುಟದಲ್ಲಿ ರಕ್ಷಣಾ ಸಚಿವರಾಗಿ ಅತ್ಯುತ್ತಮ ಕಾರ್ಯನಿರ್ವಹಿಸಿದ್ದ ಫರ್ನಾಂಡಿಸ್ ಅವರು ಕಾರ್ಮಿಕ ಪರ ಕಾಯಕ ಮಾಡಿದ್ದರು.ರಾಜ್ಯದಲ್ಲಿ ಹುಟ್ಟಿದ್ದರೂ ಮುಂಬೈನಲ್ಲಿ ರಾಜಕೀಯ ಜೀವನ ರೂಪಿಸಿಕೊಂಡು ಕಾರ್ಮಿಕರು ಮತ್ತು ಶೋಷಿತರ ನಿಜವಾದ ಧ್ವನಿಯಾಗಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ.ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸಿದರು.