ಬೆಂಗಳೂರು, ಜ.29-ಆ್ಯಪ್ ಆಧಾರಿತ ಕಂಪೆನಿಗಳ ಕಪಿಮುಷ್ಟಿಯಲ್ಲಿ ಸಿಕ್ಕಿ ನರಳುತ್ತಿರುವ ಟ್ಯಾಕ್ಸಿ ಚಾಲಕರಿಗೆ ಮುಕ್ತಿ ಕೊಡಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕರ್ನಾಟಕ ಚಾಲಕರ ಒಕ್ಕೂಟ ಮನವಿ ಮಾಡಿದೆ.
ಬಜೆಟ್ ಪೂರ್ವ ಸಿದ್ಧತೆ ಅಂಗವಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಹಮ್ಮಿಕೊಂಡಿದ್ದ ಆಟೋ-ಟ್ಯಾಕ್ಸಿ ಚಾಲಕರ ಸಂಘಗಳ ಪ್ರತಿನಿಧಿಗಳ ಸಭೆಯಲ್ಲಿ ಈ ಮನವಿ ಸಲ್ಲಿಸಿದೆವು ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಜಿ.ನಾರಾಯಣಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.
ಚಾಲಕರಿಗೆ ವಸತಿ, ಹಣಕಾಸು, ಪಾರ್ಕಿಂಗ್ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಹಲವು ಬೇಡಿಕೆಗಳುಳ್ಳ ಮನವಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದು, ಮುಂದಿನ ಬಜೆಟ್ನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಇದುವರೆಗೆ ನಮ್ಮ ಅಹವಾಲನ್ನು ಯಾರೂ ಆಲಿಸಿರಲಿಲ್ಲ. ಇಂದು ಕುಮಾರಸ್ವಾಮಿಯವರು ನಮ್ಮನ್ನೆಲ್ಲ ಕರೆದು ಸ್ಪಂದಿಸಿದ್ದಾರೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಚಾಲಕರ ದಿನಾಚರಣೆ ಆಚರಿಸುವಂತೆ ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಅಧ್ಯಕ್ಷ ಗಂಡಸಿ ಸದಾನಂದಸ್ವಾಮಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.ಬೆಂಗಳೂರು, ಜ.29-ಆ್ಯಪ್ ಆಧಾರಿತ ಕಂಪೆನಿಗಳ ಕಪಿಮುಷ್ಟಿಯಲ್ಲಿ ಸಿಕ್ಕಿ ನರಳುತ್ತಿರುವ ಟ್ಯಾಕ್ಸಿ ಚಾಲಕರಿಗೆ ಮುಕ್ತಿ ಕೊಡಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕರ್ನಾಟಕ ಚಾಲಕರ ಒಕ್ಕೂಟ ಮನವಿ ಮಾಡಿದೆ.
ಬಜೆಟ್ ಪೂರ್ವ ಸಿದ್ಧತೆ ಅಂಗವಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಹಮ್ಮಿಕೊಂಡಿದ್ದ ಆಟೋ-ಟ್ಯಾಕ್ಸಿ ಚಾಲಕರ ಸಂಘಗಳ ಪ್ರತಿನಿಧಿಗಳ ಸಭೆಯಲ್ಲಿ ಈ ಮನವಿ ಸಲ್ಲಿಸಿದೆವು ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಜಿ.ನಾರಾಯಣಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.
ಚಾಲಕರಿಗೆ ವಸತಿ, ಹಣಕಾಸು, ಪಾರ್ಕಿಂಗ್ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಹಲವು ಬೇಡಿಕೆಗಳುಳ್ಳ ಮನವಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದು, ಮುಂದಿನ ಬಜೆಟ್ನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಇದುವರೆಗೆ ನಮ್ಮ ಅಹವಾಲನ್ನು ಯಾರೂ ಆಲಿಸಿರಲಿಲ್ಲ. ಇಂದು ಕುಮಾರಸ್ವಾಮಿಯವರು ನಮ್ಮನ್ನೆಲ್ಲ ಕರೆದು ಸ್ಪಂದಿಸಿದ್ದಾರೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಚಾಲಕರ ದಿನಾಚರಣೆ ಆಚರಿಸುವಂತೆ ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ಅಧ್ಯಕ್ಷ ಗಂಡಸಿ ಸದಾನಂದಸ್ವಾಮಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಸಭೆಯಲ್ಲಿ 40 ರಿಂದ 50 ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.