
ಬೆಂಗಳೂರು, ಜ.29-ಹಿಂದೂ ಮಹಿಳೆಯರನ್ನು ಮುಟ್ಟಿದರೆ ಅವರ ಕೈಗಳನ್ನು ಕತ್ತರಿಸಬೇಕು ಎಂದು ಪ್ರಚೋದನಾತ್ಮಕ ಹೇಳಿಕೆ ನೀಡಿರುವುದಲ್ಲದೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತ್ಕುಮಾರ್ ಹೆಗಡೆ ಅವರನ್ನು ಕೇಂದ್ರ ಸಂಪುಟದಿಂದ ವಜಾ ಮಾಡಬೇಕೆಂದು ಆಗ್ರಹಿಸಿ ಬೆಂಗಳೂರು ಮಹಾನಗರ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು.
ವಿವಾದಾತ್ಮಕ ಹಾಗೂ ಪ್ರಚೋದನಾಕಾರಿ ಹೇಳಿಕೆ ನೀಡುವ ಮೂಲಕ ಪ್ರಚಾರ ಪಡೆಯುತ್ತಿರುವ ಅನಂತ್ಕುಮಾರ್ ಹೆಗಡೆ ಅವರ ಸಂಸ್ಕøತಿ ಏನೆಂಬುದು ಬಹಿರಂಗವಾಗಿದೆ.
ಈ ಹಿಂದೆ ಸಂವಿಧಾನವನ್ನೇ ಬದಲಾಯಿಸುವ ಹೇಳಿಕೆ ನೀಡಿದ್ದರು.ಈಗ ಕೈ ಕಡಿಯಿರಿ ಎಂದು ಪ್ರಚೋದನಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಇವರನ್ನು ಸಂಪುಟದಿಂದ ಕೈ ಬಿಡಬೇಕೆಂದು ಮುಖಂಡರಾದ ಎಸ್.ಮನೋಹರ್, ವಿಜಯ್ಮುಳಗುಂದ ಮತ್ತಿತರರು ಆಗ್ರಹಿಸಿದ್ದಾರೆ.
ಪ್ರತಿಭಟನೆಯಲ್ಲಿ ಸಲೀಂ, ಶೇಖರ್, ಆನಂದ್, ರಾಮಕೃಷ್ಣ, ಹೇಮರಾಜ್, ಆಶಾರಾಜ್, ರಚನಾ, ಕೋಕಿಲ, ಶೀಲ ಮತ್ತಿತರರು ಪಾಲ್ಗೊಂಡಿದ್ದರು.