ಕೈ ಸಚಿವರ ವರ್ತನೆಗೆ ಬೇಸರ ವ್ಯಕ್ತಪಡಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ಜ.30- ಸರ್ಕಾರ ಹಾಗೂ ತಮ್ಮ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡುತ್ತಿರುವ ಕೈ ಸಚಿವರನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈ ಸಚಿವರ ವರ್ತನೆ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಕುಮಾರ ಸ್ವಾಮಿಯವರು, ಹಾದಿಬೀದಿಯಲ್ಲಿ ತಮ್ಮ ಬಗ್ಗೆ ಹಾಗೂ ಸರ್ಕಾರದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದನ್ನು ಸಹಿಸಲು ಆಗುವುದಿಲ್ಲ. ನಾನೆಂದೂ ಸಿಎಂ ಪಟ್ಟ ಕೊಡಿ ಎಂದು ಯಾರ ಮನೆ ಬಾಗಿಲಿಗೂ ಹೋಗಿರಲಿಲ್ಲ ಎಂದು ತರಾಟೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ನಾನು ಸರ್ಕಾರ ನಡೆಸಬೇಕೋ ಬೇಡವೋ ಎಂದು ಖಾರವಾಗಿ ಪ್ರಶ್ನಿಸಿದ ಕುಮಾರಸ್ವಾಮಿಯವರು, ಏನೇ ಸಮಸ್ಯೆ ಇದ್ದರೂ ಬಂದು ಚರ್ಚಿಸಿ ಪರಿಹಾರ ಕಂಡುಕೊಳ್ಳೋಣ ಎಂದು ಕೈ ಸಚಿವರಿಗೆ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.

ನಿಮ್ಮ ಪಕ್ಷದ ಮುಖಂಡರು ಹಾದಿಬೀದಿಯಲ್ಲಿ ಸರ್ಕಾರದ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಅವರನ್ನು ಹದ್ದುಬಸ್ತಿನಲ್ಲಿಡಿ ಎಂದು ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ