ಶಾಸಕ ಆನಂದ್‍ಸಿಂಗ್ ಮೇಲಿನ ಹಲ್ಲೆ ಪ್ರಕರಣ; ಶೀಘ್ರದಲ್ಲೇ ಆರೋಪಿಗಳ ಬಂಧನ: ಗೃಹ ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು, ಜ.30-ಶಾಸಕ ಆನಂದ್‍ಸಿಂಗ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಪೊಲೀಸರು ಅವರ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲ್ಲೆ ಆರೋಪಿತರು ಎಲ್ಲಿ ಅಡಗಿದ್ದಾರೋ ಅಲ್ಲೆಲ್ಲ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಸಿಗುವುದಿಲ್ಲ ಎಂದು ಹೇಳಿದ ಅವರು, ಶಾಸಕ ಗಣೇಶ್ ಬಿಜೆಪಿಗೆ ಹೋಗುತ್ತಾರೆ ಎಂಬ ವಿಚಾರಕ್ಕೂ, ಈ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ