
ಬೆಂಗಳೂರು, ಜ.30- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾತನಾಡಿದ ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಅವರಿಗೆ ತಿಳಿ ಹೇಳಲಾಗಿದ್ದು, ನೋಟಿಸ್ ಕೂಡ ಜಾರಿ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯರೆಡ್ಡಿ ಯಾವಗಾಲೂ ತುಂಬಾ ಮಾತನಾಡುವವರು. ಆ ರೀತಿ ಹೇಳಿಕೆ ನೀಡಬಾರದಿತ್ತು.ಅವರು ಮಾತನಾಡಿರೋದು ತಪ್ಪು. ನಾನು ಅವರ ಜೊತೆ ಮಾತನಾಡಿದ್ದೇನೆ ಎಂದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚೆನ್ನಾಗಿದ್ದಾರೆ. ನಾಯಕರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸರ್ಕಾರದ ವಿರುದ್ಧ ಯಾರೂ ಹೇಳಿಕೆ ನೀಡಬಾರದು ಎಂದು ಈಗಾಗಲೇ ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು.