ಟೀಂ ಇಂಡಿಯಾದ ಭವಿಷ್ಯದ ಮರಿ ವಿರಾಟ್ ಕೊಹ್ಲಿ ಎಂದೇ ಕರೆಯಲ್ಪಡುತ್ತಿರುವ ಯುವ ಬ್ಯಾಟ್ಸ್ಮನ್ ಶುಭಮನ್ ಗಿಲ್ ನ್ಯೂಜಿಲೆಂಡ್ ವಿರುದ್ದದ ನಾಲ್ಕನೆ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಬಿಸಿಸಿಐ ಪ್ರಕಟಿಸಿರುವ ಆಡುವ ಹನ್ನೋಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.
ಇದರೊಂದಿಗೆ ಟೀಂ ಇಂಡಿಯಾಕ್ಕೆ ಮತ್ತೋಬ್ಬ ಪ್ರತಿಭಾವಂತ ಬ್ಯಾಟ್ಸ್ಮನ್ ಸಿಕ್ಕಾಂತಾಗಿದೆ. ಬ್ಯಾಟಿಂಗ್ನಲ್ಲಿ ವಿರಾಟ್ ಕೊಹ್ಲಿಯನ್ನೆ ಹೋಲುವ ಈ ಪಂಜಾಬ್ ಬ್ಯಾಟ್ಸ್ಮನ್ ಭವಿಷ್ಯಾದ ವಿರಾಟ್ ಕೊಹ್ಲಿ ಅಂತಾನೆ ಫೇಮಸ್ ಆಗಿದ್ದಾರೆ.
ಕಳೆದ ವರ್ಷ ಕಿವೀಸ್ನಾಡಲ್ಲಿ ನಡೆದ ಅಂಡರ್ 19 ವಿಶ್ವಕಪ್ನಲ್ಲಿ ಶುಭಮನ್ ಗಿಲ್ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ರು.
ಈಗಾಗಿ ಕೊನೆಯ ಎರಡು ಪಂದ್ಯಗಳಿಗೆ ವಿಶ್ರಾಂತಿ ಪಡೆದಿರುವ ನಾಯಕ ವಿರಾಟ್ ಕೊಹ್ಲಿ ಸ್ಥಾನವನ್ನ ಶುಭಮನ್ ನೀಡುವ ಸಾಧ್ಯತೆ ಇದೆ. ಶುಭಮನ್ ಗಿಲ್ ಸದ್ಯ ಭರ್ಜರಿ ಫಾರ್ಮ್ನಲ್ಲಿದ್ದು ಈ ಬಾರಿಯ ರಣಜಿ ಟೂರ್ನಿಯಲ್ಲಿ ಬೊಂಬಾಟ್ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ.