ಫೆ.21ರಿಂದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಅಡಿಪಾಯ

ನವದೆಹಲಿ: ಫೆ.21ರಿಂದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಿಸಲಾಗುವುದು, ಅಂದು ಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕಲಾಗುವುದು ಎಂದು ಧರ್ಮಸಂಸತ್ ಘೋಷಣೆ ಮಾಡಿದೆ.

ಪ್ರಯಾಗ್‌ರಾಜ್‌ನಲ್ಲಿ ಧರ್ಮ ಸಂಸತ್ ನ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸ್ವರೂಪಾನಂದ್‌ ಸ್ವಾಮೀಜಿ, ನಾವು ಸರ್ವೋಚ್ಚ ನ್ಯಾಯಾಲಯವನ್ನು ಗೌರವಿಸುತ್ತೇವೆ; ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಗೌರವಿಸುತ್ತೇವೆ. ಆದರೆ ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಿಸುವ ಕಾಲ ಈಗ ಕೂಡಿ ಬಂದಿದೆ ಎಂದು ತಿಳಿಸಿದ್ದಾರೆ.

ಫೆ.21ರಂದು ಇಟ್ಟಿಗೆಗಳನ್ನು ಹೊತ್ತು ಅಯೋಧ್ಯೆಗೆ ತೆರಳಿ, ಮಂದಿರ ನಿರ್ಮಾಣಕ್ಕೆ ಅಡಿಪಾಯ ಹಾಕುತ್ತೇವೆ. ಇದನ್ನು ತಡೆಯಬಾರದು. ಒಂದು ವೇಳೆ ಇದಕ್ಕೆ ಅಡ್ಡಿಪಡಿಸಿದರೆ, ದೇಶದ ಹಿಂದುಗಳೆಲ್ಲರೂ ಮುನ್ನುಗ್ಗಿ ಬರಬೇಕು ಎಂದು ಕರೆ ನೀಡಿದ್ದಾರೆ.

ಇದೇ ವೇಳೆ, ಅಯೋಧ್ಯೆಯ ಸುತ್ತಮುತ್ತಲಿನ 66 ಎಕರೆ ಖಾಲಿ ಭೂಮಿಯನ್ನು ಅದರ ಮೂಲ ಒಡೆತನ ಹೊಂದಿರುವ ರಾಮ ಜನ್ಮಭೂಮಿ ನ್ಯಾಸಕ್ಕೆ ಮರಳಿಸುವ ಬಗ್ಗೆ ಸರಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿರುವ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Shankaracharya Swaroopanand Saraswati,  Ayodhya, Ram Mandir

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ