2014ರಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಲಭಿಸಿದ್ದರಿಂದ ದೇಶ ಪ್ರಗತಿಯತ್ತ ಸಾಗಿದೆ: ಪ್ರಧಾನಿ ಮೋದಿ

ಸೂರತ್, ಜ.31- ಲೋಕಸಭೆಗೆ 2014ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಲಭಿಸಿದ್ದರಿಂದ ದೇಶ ಪ್ರಗತಿಯತ್ತ ಸಾಗಿದೆ. ಅದೇ ಸಮ್ಮಿಶ್ರ ಸರ್ಕಾರವಾಗಿದ್ದರೆ ಅಭಿವೃದ್ಧಿ ಕುಂಠಿತವಾಗುತ್ತಿತ್ತು ಎಂದು ಮೋದಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳನ್ನು ಕುಟುಕಿದ್ದಾರೆ.

ಕಳೆದ ಮೂರು ದಶಕಗಳಿಂದ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದಿದ್ದ ಕಾರಣ ದೇಶ ಅಭಿವೃದ್ಧಿ ಪಥದಲ್ಲಿ ನಡೆಯಲು ಸಾಧ್ಯವಾಗಿರಲಿಲ್ಲ. ಆದರೆ, 2014ರಲ್ಲಿ ಮತದಾರರು ತೆಗೆದುಕೊಂಡ ದಿಟ್ಟ ನಿರ್ಧಾರ ಇಂದು ಭಾರತ ಪ್ರಗತಿಯತ್ತ ಸಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸೂರತ್ ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ನೋಟು ಅಮಾನ್ಯೀಕರಣವನ್ನು ಸಮರ್ಥಿಸಿಕೊಂಡರು. ನೋಟು ನಿಷೇಧದಿಂದ ಮನೆಗಳ ಬೆಲೆ ತಗ್ಗಿಸಲು ಮತ್ತು ರಿಯಲ್ ಎಸ್ಟೇಟ್ ವಲಯದಲ್ಲಿ ಕಪ್ಪು ಹಣ ಚಲಾವಣೆಯಾಗುವುದು ಕಡಿಮೆಯಾಗಿದೆ ಎಂದರು.

ಕಳೆದ 30 ವರ್ಷಗಳಿಂದ ಯಾವುದೇ ಪಕ್ಷಗಳಿಗೂ ಸ್ಪಷ್ಟ ಬಹುಮತ ಸಿಗದಿದ್ದ ಕಾರಣ ಭಾರತ ಅಸ್ಥಿರತೆ ಕಂಡಿತು. ಇದು ದೇಶದ ಅಭಿವೃದ್ಧಿಯನ್ನು ಸ್ಥಗಿತಗೊಳಿಸಿತ್ತು. ಆದರೆ, 2014ರಲ್ಲಿ ಮತದಾರರು ಬುದ್ಧಿ ಉಪಯೋಗಿಸಿ ಮತ ಚಲಾವಣೆ ಮಾಡಿದ್ದು, ಒಂದು ಪಕ್ಷಕ್ಕೆ ಬಹುಮತ ಸಿಕ್ಕಿದ್ದರಿಂದ ಇಂದು ದೇಶ ಪ್ರಗತಿಯತ್ತ ಸಾಗುತ್ತಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ