ವಾಷಿಂಗ್ಟನ್: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಎನ್ ಡಿಎ ಸರ್ಕಾರದ ಕೊನೆ ಹಾಗೂ ಮಧ್ಯಂತರ ಬಜೆಟ್ ಮಂಡನೆ ಮಾಡಿದ ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯಲ್ ಅವರಿಗೆ ಹಣಕಾಸು ಸಚಿವ ಅರುಣ್ ಜೇಟ್ಲಿ ಅಭಿನಂದನೆ ಸಲ್ಲಿಸಿದ್ದಾರೆ.
ಅಮೆರಿಕದ ವಾಷಿಂಗ್ಟನ್ನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ವಿತ್ತ ಸಚಿವ ಅರುಣ್ ಜೇಟ್ಲಿ ಸರಣಿ ಟ್ವೀಟ್ ಮಾಡಿದ್ದು, ಅತ್ಯದ್ಬುತ ಬಜೆಟ್ ಮಂಡನೆ ಮಾಡಿರುವ ಗೋಯಲ್ ಹಾಗೂ ಪ್ರಧಾನಿ ಮೋದಿಯವರಿಗೆ ನನ್ನ ಅಭಿನಂದನೆಗಳು ಎಂದಿದ್ದಾರೆ.
2014ರಿಂದ 2019ರವರೆಗೆ ಮಂಡನೆಯಾಗಿರುವ ಪ್ರತಿ ಬಜೆಟ್ನಲ್ಲೂ ಮಧ್ಯಮ ವರ್ಗದವರಿಗೆ ರಿಲೀಫ್ ನೀಡಲಾಗಿದ್ದು, ರೈತರು, ಕೆಳವರ್ಗ ಹಾಗೂ ಕಾರ್ಮಿಕ ವರ್ಗವನ್ನ ಗಮನದಲ್ಲಿಟ್ಟುಕೊಂಡು ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.