ಬಜೆಟ್ ನಲ್ಲಿ ಮಹಿಳಾ ಸಬಲೀಕರಣಕ್ಕೆ ಒತ್ತು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬಜೆಟ್-2019 ಮಂಡನೆಯಾಗಿದ್ದು, ಮಹಿಳೆಯರ ಕಲ್ಯಾಣಕ್ಕಾಗಿ, ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಹೆಚ್ಚಿನ ಒತ್ತ ನೀಡಲಾಗಿದೆ ಎಂದು ವಿತ್ತ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.

26 ವಾರಕ್ಕೆ ಹೆರಿಗೆ ರಜೆಯನ್ನು ವಿಸ್ತರಿಸಲಾಗಿದೆ. ಮಾತೃ ವಂದನಾ ಯೋಜನೆಯಡಿ ಚೊಚ್ಚಲ ಗರ್ಭಿಣಿಯರಿಗೆ ಹಣಕಾಸು ಸಹಕಾರ ನೀಡುವುದಾಗಿ ಬಜೆಟ್​ನಲ್ಲಿ ತಿಳಿಸಲಾಗಿದೆ.

ಮಹಿಳೆಯರ ಅನುಕೂಲಕ್ಕಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಈಗಾಗಲೇ 6 ಕೋಟಿ ಕುಟುಂಬಗಳಿಗೆ ಉಚಿತ ಎಲ್​ಪಿಜಿ ಗ್ಯಾಸ್​ ಸಂಪರ್ಕ ನೀಡಲಾಗಿದೆ. ಒಟ್ಟು 8 ಕೋಟಿ ಕುಟುಂಬಗಳಿಗೆ ನೀಡಬೇಕಾಗಿದ್ದು ಉಳಿದವುಗಳನ್ನು ಬರುವ ವರ್ಷದೊಳಗೆ ಸಂಪೂರ್ಣಗೊಳಿಸುತ್ತೇವೆ ಎಂಬ ಭರವಸೆ ನೀಡಿದರು.

ಸ್ವ ಉದ್ಯೋಗ ಸಾಲ ಸಂಬಂಧಿ ಪ್ರಧಾನ ಮಂತ್ರಿ ಮುದ್ರಾ ಯೋಜನೆಯಡಿ ಶೇ.70ರಷ್ಟು ಮಹಿಳೆಯರು ಸಾಲ ಪಡೆದು ಅವರ ಸ್ವ ಉದ್ಯೋಗದಲ್ಲಿ ತೊಡಗಿ ಆರ್ಥಿಕವಾಗಿ ಸದೃಢರಾಗಿದ್ದಾರೆ ಎಂದು ತಿಳಿಸಿದರು.

Budget 2019-20,piyush goyel,maternity-leave

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ