ಐಐಟಿ ಹೈದರಾಬಾದ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಹೈದರಾಬಾದ್: ಐಐಟಿ ಹೈದರಾಬಾದ್‌ನ ಅಂತಿಮ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಅನಿರುಧ್ಯಾ ಮುಮ್ಮನೇನಿ ( 21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. 7 ಅಂತಸ್ತಿನ ಹಾಸ್ಟೆಲ್ ಕಟ್ಟಡದ ಟೆರೇಸ್‌ನಿಂದ ಕೆಳಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಆರಂಭದಲ್ಲಿ ವಿದ್ಯಾರ್ಥಿ ಆಕಸ್ಮಿಕವಾಗಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿತ್ತು. ಆದರೆ ಈಗ ಸಂಗಾರೆಡ್ಡಿ ಗ್ರಾಮಾಂತರ ಪೊಲೀಸರು ತನಿಖೆ ನಡೆಸಿ, ಸಿಸಿಟಿವಿ ದೃಶ್ಯಾವಳಿಯನ್ನು ಆಧರಿಸಿ ಈ ಪ್ರಕರಣವನ್ನು ಆತ್ಮಹತ್ಯೆ ಎಂದು ಖಚಿತಪಡಿಸಿದ್ದಾರೆ.

ಮೆಕ್ಯಾನಿಕಲ್ ಹಾಗೂ ಏರೋನಾಟಿಕಲ್ ಎಂಜಿನಿಯರಿಂಗ್‌ನ ಅಂತಿಮ ವರ್ಷದ ವಿದ್ಯಾರ್ಥಿ ಅನಿರುಧ್ಯಾ ಮುಮ್ಮಾನೇನಿ ಮಧ್ಯರಾತ್ರಿ 12.50 ರ ವೇಳೆಗೆ ಹಾಸ್ಟೆಲ್‌ನ ಡಿ ಬ್ಲಾಕ್‌ನ ಟೆರೇಸ್‌ಗೆ ಹೋಗಿದ್ದಾನೆ. ನಂತರ ಮೇಲಿನಿಂದ ಕೆಳಕ್ಕೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ.

IIT Hyderabad Student Dies After Falling From Campus Building

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ