ಹೈದರಾಬಾದ್: ತಿರುಪತಿ ತಿರುಮಲ ದೇವಸ್ಥಾನದ ಅಧೀನದಲ್ಲಿರುವ ಶ್ರೀ ಗೋವಿಂದರಾಜಸ್ವಾಮಿ ದೇವಸ್ಥಾನದ ಮೂರು ವಜ್ರಖಚಿತ ಚಿನ್ನದ ಕಿರೀಟಗಳು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಟಿಟಿಡಿ ಅಧೀನದಲ್ಲಿ ಬರುವ ಈ ದೇವಸ್ಥಾನದಲ್ಲಿ ಶನಿವಾರ ಸಂಜೆ 5.45ರ ಸುಮಾರಿಗೆ ಅರ್ಚಕರು ಬಾಗಿಲು ತೆರೆದಾಗ ಈ ವೇಳೆ ಕಿರೀಟಗಳು ನಾಪತ್ತೆಯಾಗಿರುವುದು ಗೊತ್ತಾಗಿದೆ.
ಬೆಳಿಗ್ಗೆ ದೇವಸ್ಥಾನದ ಪೂಜಾ ಕಾರ್ಯಗಳು ಹಾಗೂ ಭಕ್ತರ ದರ್ಶನ ಮುಗಿದ ಬಳಿಕ ಸಂಜೆ 5 ಗಂಟೆ ಸುಮಾರಿಗೆ ದೇವಸ್ಥಾನದ ಬಾಗಿಲು ಬಂದ್ ಮಾಡಲಾಗಿತ್ತು. ನಂತರ 45 ನಿಮಿಷ ಬಿಟ್ಟು ಮತ್ತೆ ಪೂಜಾ ಕಾರ್ಯಗಳಿಗಾಗಿ ದೇವಸ್ಥಾನದ ಬಾಗಿಲು ತೆರೆದ ವೇಳೆ ಕಿರೀಟಗಳು ನಾಪತ್ತೆಯಾಗಿದ್ದವು ಎಂದು ಜಂಟಿ ಕಾರ್ಯನಿರ್ವಾಹಕ ಅಧಿಕಾರಿ ಬಿ. ಭಾಸ್ಕರ್ ತಿಳಿಸಿದ್ದಾರೆ.
Three golden crowns missing at Tirupati’s Sri Govindarajaswamy temple