ಸೀಮಾಂಚಲ ಎಕ್ಸ್ ಪ್ರೆಸ್ ರೈಲು ದುರಂತ: ಪ್ರಧಾನಿ ಮೋದಿ ಸಂತಾಪ

ವೈಶಾಲಿ: ಸೀಮಾಂಚಲ ಎಕ್ಸ್ ಪ್ರೆಸ್ ರೈಲಿನ 11 ಬೋಗಿಗಳು ಹಳಿತಪ್ಪಿ ಸಂಭವಿಸಿದ ದುರಂ 7 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ದುರಂತದ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಭವಿಸಿದ ಅವಗಢದಲ್ಲಿ 7 ಜನರು ಸಾವನ್ನಪ್ಪಿದ್ದು, 24ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಬಿಹಾರದ ವೈಶಾಲಿ ಜಿಲ್ಲೆಯ ಸಹದೇಯಿ ಬುಜುರ್ಗ್‌ ಮುಂಜಾನೆ ಸೀಮಾಂಚಲ ಎಕ್ಸ್ ಪ್ರೆಸ್ ರೈಲಿನ 11 ಬೋಗಿಗಳು ಹಳಿತಪ್ಪಿ ಈ ದುರಂತ ಸಂಭವಿಸಿತ್ತು. ಘಟನೆಯಲ್ಲಿ 7 ಜನ ಸಾವನ್ನಪ್ಪಿದ್ದು, 27 ಜನ ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರ ಸ್ಥೊತಿ ಗಂಭೀರವಾಗಿದೆ. ಮೂರು ಸ್ಲೀಪರ್ ಕೋಚ್‌ಗಳು ಹಾಗೂ ಒಂದು ಜನರಲ್ ಹಾಗೂ ಒಂದು ಎಸಿ ಹಾಗೂ ಇನ್ನೂ ನಾಲ್ಕು ಕೋಚ್ ಗಳು ಹಳಿ ತಪ್ಪಿವೆ. ಬರೌನಿ ನಿಲ್ದಾಣದ ಕೊನೆಯಲ್ಲಿ ಹಳಿ ತುಂಡಾಗಿರುವುದೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.

ದುರಂತ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ ವಿಷಯ ಕೇಳಿ ತೀವ್ರ ದುಖಃವಾಗುತ್ತಿದೆ. ಮೃತರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ರೈಲ್ವೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಸ್ಥಳೀಯ ಅಧಿಕಾರಿಗಳು ಅಪಘಾತದ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಅಗತ್ಯ ಸಹಾಯವನ್ನು ಒದಗಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ರೈಲು ದುರಂತ ಹಿನ್ನಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ದು:ಖ ವ್ಯಕ್ತಪಡಿಸಿದ್ದಾರೆ.

ಇನ್ನು ಮೃತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ರೂ ಪರಿಹಾರವನ್ನು ರೈಲ್ವೆ ಇಲಾಖೆ ಘೋಷಿಸಿದೆ.

Seemanchal Express derailment; PM Modi, Rahul condoles

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ