ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಇಬ್ಬರ ಸಾವು

ಬಳ್ಳಾರಿ,ಫೆ.3-ಬೈಕ್‍ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಪೇಟೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹೊನ್ನೂರಪ್ಪ(58), ಕೋದಂಡಪಾಣಿ(48) ಮೃತಪಟ್ಟ ದುರ್ದೈವಿಗಳು.
ಇಂದು ಬೆಳಗ್ಗೆ ಇಬ್ಬರೂ ಬೈಕ್‍ನಲ್ಲಿ ತೆರಳುವಾಗ ಹೊಸಪೇಟೆ ತಾಲ್ಲೂಕಿನ ಮರಿಯಮ್ಮನಹಳ್ಳಿಯ ಬಳಿ ಲಾರಿ ಬೈಕ್‍ಗೆ ಡಿಕ್ಕಿ ಹೊಡೆದಿದೆ.ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಸಂಬಂಧ ಹೊಸಪೇಟೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ