ಅವಿಶ್ವಾಸ ನಿರ್ಣಯ ಮಂಡಿಸುವ ಕೆಲಸ ಮಾಡುವುದಿಲ್ಲ: ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್

ಬೆಂಗಳೂರು, ಫೆ.3- ಅವಿಶ್ವಾಸ ನಿರ್ಣಯ ಮಂಡಿಸುವ ಕೆಲಸವನ್ನು ನಾವು ಮಾಡುವುದಿಲ್ಲ. ದೋಸ್ತಿ ಪಕ್ಷಗಳ ಜಗಳದಿಂದ ಸರ್ಕಾರ ಬಿದ್ದುಹೋದರೆ ನಂತರ ನಾವು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದರು.

ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್-ಜೆಡಿಎಸ್ ಒಳಜಗಳ ನಡೆಯುತ್ತಿದ್ದು, ಅವರ ಸರ್ಕಾರ ತಾನಾಗಿಯೇ ಬಿದ್ದುಹೋಗುತ್ತದೆ. ನಂತರ ನಾವು ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಸಮ್ಮಿಶ್ರ ಸರ್ಕಾರದ ಒಳಜಗಳ ಮತ್ತು ಬೇಗುದಿಯಿಂದಾಗಿ ರಾಜ್ಯದ ಜನ ಸೊರಗುತ್ತಿದ್ದಾರೆ, ಅಭಿವೃದ್ಧಿಯಾಗುತ್ತಿಲ್ಲ, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

ಎಸ್.ಎಂ.ಕೃಷ್ಣ ಅವರು ನಮ್ಮ ಪಕ್ಷದ ಹಿರಿಯ ನಾಯಕರು.ಅವರನ್ನು ಯಾರು ಭೇಟಿ ಮಾಡಿದರೂ ನಮ್ಮ ಅಭ್ಯಂತರವಿಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ