ಕೇಂದ್ರ ಮತ್ತು ಪಶ್ಚಿಮ ಬಂಗಾಲ ಬಿಕ್ಕಟ್ಟು ತುರ್ತು ಪರಿಸ್ಥಿತಿ ನೆನಪಿಸುತ್ತದೆ: ಮಾಜಿ ಪ್ರಧಾನಿ ದೇವೆಗೌಡ

ಬೆಂಗಳೂರು, ಫೆ.4-ಚಿಟ್‍ಫಂಡ್ ಹಗರಣಕ್ಕೆ ಸಂಬಂಧಪಟ್ಟಂತೆ ಕೋಲ್ಕತ್ತಾ ಪೆÇಲೀಸ್ ಆಯುಕ್ತರನ್ನು ಸಿಬಿಐ ವಿಚಾರಣೆಗೆ ಒಳಪಡಿಸುವ ವಿಷಯದಲ್ಲಿ ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ಸರ್ಕಾರದ ನಡುವೆ ತಲೆದೋರಿರುವ ಬಿಕ್ಕಟ್ಟು ತುರ್ತು ಪರಿಸ್ಥಿತಿ ದಿನಗಳನ್ನು ನೆನಪಿಸುವಂತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದ್ದಾರೆ.

ಈ ಬೆಳವಣಿಗೆಗೆ ಸಂಬಂಧಿಸಿದಂತೆ ಟಿಎಂಸಿ ನಾಯಕಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಸರ್ಕಾರ ನಡೆಸುತ್ತಿರುವ ಹೋರಾಟಕ್ಕೆ ಜೆಡಿಎಸ್ ವರಿಷ್ಠರು ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.

ಕೋಲ್ಕತ್ತಾ ಪೆÇಲೀಸ್ ಆಯುಕ್ತರನ್ನು ಬಂಧಿಸಲು ಸಿಬಿಐ ಯತ್ನಿಸಿದ ಪ್ರಸಂಗ ಮತ್ತು ಆನಂತರದ ವಿದ್ಯಮಾನಗಳ ಬಗ್ಗೆ ದೇವೇಗೌಡರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.

ತುರ್ತು ಪರಿಸ್ಥಿತಿ ದಿನಗಳಲ್ಲಿ ಅಸಂವಿಧಾನಿಕವಾಗಿ ನಡೆದ ರೀತಿಯಂತೆ ಬೆಳವಣಿಗೆಗಳು ನಡೆದಿವೆ. ಎಮರ್ಜೆನ್ಸಿ ದಿನಗಳನ್ನು ಇದು ನೆನಪಿಸುತ್ತಿದೆ. ಪ್ರಜಾಪ್ರಭುತ್ವವವನ್ನು ರಕ್ಷಿಸಬೇಕಿದೆ ಎಂದು ದೇವೇಗೌಡರು ಟ್ವೀಟ್ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ